ಕಿಮ್ಮನೆ ಉತ್ತರಕ್ಕೆ ಜೆಡಿಎಸ್‌ನ ಮರಿತಿಬ್ಬೇಗೌಡ ಸಭಾತ್ಯಾಗ

ಶುಕ್ರವಾರ, 3 ಜುಲೈ 2015 (13:28 IST)
ನಗರದ ಸುವರ್ಣಸೌಧದಲ್ಲಿ ಐದನೇ ದಿನವಾದ ಇಂದು ವಿಧಾನಸಭಾ ಕಲಾಪ ನಡೆಯುತ್ತಿದ್ದು, ಕಲಾಪದಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ರಾಜ್ಯ ಸರ್ಕಾರ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಶಿಕ್ಷಕರ ವೇತನದಲ್ಲಿ ತಾರತಮ್ಯ ಎಸಗುತ್ತಿದ್ದು, ಇದನ್ನು ಸರಿಪಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. 
 
ಸದನದ ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ರಾಜ್ಯ ಸರ್ಕಾರ ಪ್ರೌಢಶಾಲಾ ಹಾಗೂ ಪದವಿಪೂರ್ವ ಶಿಕ್ಷಕರ ವೇತನದಲ್ಲಿ ತಾರತಮ್ಯ ಅನುಸರಿಸುತ್ತಿದ್ದೆ. ಇದನ್ನು ಕೂಡಲೇ ಸರಿದೂಗಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಕಿಮ್ಮನೆ ರತ್ನಾಕರ್ ಅವರು, ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ತರಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಲಿದ್ದೇನೆ ಎಂದರು. ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಎಷ್ಟು ಕಾಲಾವಕಾಶ ಬೇಕು ಎಂದು ಪ್ರಶ್ನಿಸಿದರು. ಈದರೆ ಇದಕ್ಕೆ ಸಚಿವರು ಉತ್ತರಿಸಲು ನಿರಾಕರಿಸಲಾಗಿ ಮರಿತಿಬ್ಬೇಗೌಡ ಆಕ್ರೋಶ ವ್ಯಕ್ತಪಡಿಸಿ ಸಭಾತ್ಯಾಗಕ್ಕೆ ಮುಂದಾದರು. 
 
ಪ್ರಸ್ತುತ ಪ್ರೌಢಶಾಲಾ ಶಿಕ್ಷಕರು ವಾರ್ಷಿಕವಾಗಿ 1,17,423 ರೂ. ಪಡೆಯುತ್ತಿದ್ದರೆ, ಪದವಿ ಪೂರ್ವ ಶಿಕ್ಷಕರು Rs. 22,800/- to Rs. 43,200/- ಪೆಡೆಯುತ್ತಿದ್ದಾರೆ. 

ವೆಬ್ದುನಿಯಾವನ್ನು ಓದಿ