ಬೆಂಗಳೂರು : ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ಮಗನ ಮದುವೆ ವಿಚಾರ ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ .
ಪರಮೇಶ್ವರ್ ನಾಯ್ಕ್ ಮಗನ ಮದುವೆಯಲ್ಲಿ ಕೊವಿಡ್ ನಿಯಮವನ್ನು ಉಲ್ಲಂಘಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕೋರ್ಟ್ ಅನುಮತಿ ಪಡೆದು ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ.