ಹುತಾತ್ಮ ರೈತ ದಿನಾಚರಣೆ: ಜನಪ್ರತಿನಿಧಿಗಳು ಭಾಗವಹಿಸಲು ಅವಕಾಶವಿಲ್ಲ!

ಗುರುವಾರ, 21 ಜುಲೈ 2016 (09:12 IST)
ಧಾರವಾಡ ಜಿಲ್ಲೆಯ ನವಲಗುಂದನಲ್ಲಿ ಹುತಾತ್ಮ ರೈತರ ದಿನಾಚಾರಣೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ರೈತಪರ ಸಂಘಟನೆಗಳು ತಿಳಿಸಿವೆ.
 
ಧಾರವಾಡ ಜಿಲ್ಲೆಯ ನವಲಗುಂದ ರೈತ ಬಂಡಾಯದಲ್ಲಿ ಇಬ್ಬರು ರೈತರು ಮೃತಪಟ್ಟು 36 ವರ್ಷ ಗತಿಸಿದ ಹಿನ್ನೆಲೆಯಲ್ಲಿ ರೈತ ಪರ ಸಂಘಟನೆಗಳು ಇಂದು ಹುತಾತ್ಮ ರೈತ ದಿನಾಚರಣೆ ಆಚರಿಸಲು ನಿರ್ಧರಿಸಿವೆ.
 
ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ರೈತರು ಕಳೆದ ಒಂದು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಜನಪ್ರತಿನಿಧಿಗಳು ಪ್ರತಿಭಟನೆಗೆ ಸ್ಪಂದಿಸಿಲ್ಲ ಎಂದು ಹುತಾತ್ಮ ರೈತರ ಸ್ತೂಪಕ್ಕೆ ಅವರು ಮಾಲಾರ್ಪಣೆ ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ರೈತರು ತಿಳಿಸಿದ್ದಾರೆ.
 
ಹೋರಾಟದಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 5 ಡಿವೈಎಸ್‌ಪಿ, 10 ಇನ್ಸ್‌ಪೆಕ್ಟರ್, 25 ಪಿಎಸ್‌ಐ ಮತ್ತು 800 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಐಜಿಪಿ ಡಾ.ಕೆ.ರಾಮಚಂದ್ರರಾವ್ ತಿಳಿಸಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ