ಮಸೀದಿ ವಿವಾದ ಹೈಕೋರ್ಟ್ ಅಂಗಳಕ್ಕೆ

ಬುಧವಾರ, 2 ನವೆಂಬರ್ 2022 (12:50 IST)
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಂದಿರವೋ ಅಥವಾ ಮಸೀದಿಯೋ ಇತ್ಯರ್ಥಕ್ಕೆ ಕೊನೆಯ ಸಿದ್ಧತೆಗಳು ನಡೆದಿದೆ.

ಇನ್ನೆರಡು ದಿನಗಳಲ್ಲಿ ಹೈಕೊರ್ಟ್ನಲ್ಲಿ 108 ಹನುಮ ಭಕ್ತರು ದಾವೆ ಹೂಡಲಿದ್ದಾರೆ. 5 ತಿಂಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಜಾಮಿಯಾ ಮಸೀದಿಯಲ್ಲ ಹನುಮ ಮಂದಿರ ಎಂದು ಹೋರಾಟ ನಡೆಸಿತ್ತು.

ಮಸೀದಿ ಜಾಗ ಹಿಂದೂಗಳಿಗೆ ಮರಳಿ ನೀಡುವಂತೆ ಸರ್ಕಾರಕ್ಕೆ ಗಡುವು ನೀಡಿದ್ದವು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಇದೀಗ ಕೋರ್ಟ್ ಮೊರೆ ಹೋಗಲಾಗಿದೆ.

ಅಯೋಧ್ಯೆ ಶ್ರೀರಾಮ ಮಂದಿರ ರೀತಿ ಹನುಮ ಮಂದಿರಕ್ಕಾಗಿ ನ್ಯಾಯಾಂಗ ಹೋರಾಟ ನಡೆಸಲು ಕೊನೆಯ ಹಂತದ ತಯಾರಿಗಳು ಸಹ ಇದೀಗ ಮುಕ್ತಾಯಗೊಂಡಿವೆ. 108 ಹನುಮ ಭಕ್ತರಿಂದ ಹೈಕೋರ್ಟ್ಗೆ ದಾವೆ ಹೂಡಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ