ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯವಿಲ್ಲ

ಶುಕ್ರವಾರ, 23 ಡಿಸೆಂಬರ್ 2022 (19:43 IST)
ಸದ್ಯಕ್ಕೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯವಿಲ್ಲ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬೆಳಗಾವಿಯ ಸುವರ್ಣಸೌಧದಲ್ಲಿ ಆರೋಗ್ಯ ಸಚಿವ K.ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲೂ ಮಾರ್ಗಸೂಚಿ ಹೇಳಿದ್ದಾರೆ. ಕೇಂದ್ರದ ಆರೋಗ್ಯ ಇಲಾಖೆಯಿಂದ ಮಾರ್ಗದರ್ಶನ ಸೂಚಿಸಿದ್ದಾರೆ. ಇಂದು 3 ಗಂಟೆಗೆ ಕೇಂದ್ರ ಆರೋಗ್ಯ ಇಲಾಖೆ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ರು. ಕೇಂದ್ರ ಸಚಿವ ಮನ್ಸುಖ್‌ ಮಾಂಡವೀಯ ಅವರ ಸಭೆಯಲ್ಲಿ ಭಾಗಿಯಾಗ್ತೀವಿ. ಸಭೆಯಲ್ಲಿ ಏನು ನಿರ್ಣಯ ಆಗುತ್ತೋ ಎಂಬುದನ್ನು ನೋಡೋಣ ಎಂದು ಸುವರ್ಣಸೌಧದಲ್ಲಿ ಆರೋಗ್ಯ ಸಚಿವ K.ಸುಧಾಕರ್ ಹೇಳಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ