ರಾಜ್ಯದಲ್ಲಿ ಗರ್ಭಿಣಿ,ಬಾಣಂತಿಯರಿಗೂ ಮಾಸ್ಕ್ ಕಡ್ಡಾಯ
ಕೇರಳ-ತಮಿಳುನಾಡು ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ. ದಿನದಿಂದ ದಿನಕ್ಕೆ ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಸೋಂಕು ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸುತ್ತೋಲೆ ಹೊರಡಿಸಿದ್ದು, ಗರ್ಭಿಣಿ, ಬಾಣಂತಿಯರಿಗೆ ಮಾಸ್ಕ್ ಕಡ್ಡಾಯ ಅಂತಾ ಹೇಳಲಾಗಿದೆ.