ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಮತ್ತು ಬಿಎಸ್ಪಿ ಹಾಗೂ ವಿವಿಧ ಸಂಘಟನೆಗಳಿಂದ ಉಗ್ರ ಪ್ರತಿಭಟನೆ ಮುಂದುವರಿದೆ.
ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ತಹಸೀಲ್ದಾರ ಕಛೇರಿ ಎದರುಗಡೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಧರ್ಮ, ಜಾತಿ, ಭಾಷೆ ಹೆಸರಿನ ಮೇಲೆ ಜನರನ್ನು ಬೇರ್ಪಡಿಸುವ ಸಂವಿಧಾನ ವಿರೋಧಿ ಸಿಎಎ ಮತ್ತು ಎನ್ ಆರ್ ಸಿ ಮಸುದೆ ವಾಪಸ್ ಪಡೆಯುವಂತೆ ಪ್ರತಿಭಟನೆ ಮೂಲಕ ಒತ್ತಾಯಿಸಿದರು.
ತಹಸೀಲ್ದಾರ ಮೂಲಕ ಮನವಿ ಪತ್ರ ಸಲ್ಲಿಸುವ ಮೂಲಕ ಪ್ರತಿಭಟನಾ ನಿರತರು, ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸುವದಾಗಿ ಎಚ್ಚರಿಕೆ ನೀಡಿದರು.