ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ

ಬುಧವಾರ, 11 ಸೆಪ್ಟಂಬರ್ 2019 (10:21 IST)
ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.ಡಿಕೆಶಿ ಬಂಧನ ಖಂಡಿಸಿ ಇಂದು ನ್ಯಾಷನಲ್ ಕಾಲೇಜ್ ಮೈದಾನದಿಂದ ರಾಜಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪ್ರತಿಭಟನೆಗೆ ಲಕ್ಷಾಂತರ ಜನರು ಬರುವ ನಿರೀಕ್ಷೆಯಿದೆ.

 

ಈ ಹಿನ್ನಲೆಯಲ್ಲಿ ಬೆಂಗಳೂರು ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತವಾಗಲಿದೆ. ಈಗಾಗಲೇ ಮೆಜಿಸ್ಟಿಕ್ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ