ಪೌರತ್ವ ಕಾಯ್ದೆ ವಿರೋಧಿಸಿ ಇಂದು ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ

ಸೋಮವಾರ, 23 ಡಿಸೆಂಬರ್ 2019 (11:06 IST)
ಭಟ್ಕಳ: ಕೆಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.



ಭಟ್ಕಳ ಪಟ್ಟಣದ ಅಂಜುಮನ್ ಮೈದಾನದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ತಂಜೀಮ್ ಸಂಸ್ಥೆ ವತಿಯಿಂದ ಪ್ರತಿಭಟನೆ ನಡೆಯಲಿದೆ.


ಪ್ರತಿಭಟನೆ ಹಿನ್ನಲೆ  ಭಟ್ಕಳದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ