ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ, ಪ್ರವಾಸೋದ್ಯಮ, ಕೃಷಿ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ ಆಯೋಜಿಸಿರುವ “ *ಚಿಕ್ಕಮಗಳೂರು ಹಬ್ಬ”ದ ಉದ್ಘಾಟಿಸಿ ಮಾತನಾಡಿದರು.
ಚಿಕ್ಕಮಗಳೂರು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸಬೇಕಿದೆ. ಜಿಲ್ಲೆಯಲ್ಲಿ ಹೆಲಿಕಾಪ್ಟರ್ ರೈಡ್ ನ್ನು ಒಳಗೊಂಡಂತೆ ಪ್ರವಾಸಿ ಹಬ್ ಮಾಡುತ್ತಿರುವುದು ಒಳ್ಳಯ ಕೆಲಸ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರ್ಯಾಕ್ ರೇಸಿಂಗ್, ಗ್ಲೈಡಿಂಗ್, ಗಾಲ್ಫಿಂಗ್ ಸೇರಿದಂತೆ ಅಡ್ವೆಂಚರ್ ಟೂರಿಸಂ (ಸಾಹಸ ಪ್ರವಾಸಿ ತಾಣ) ಅಭಿವೃದ್ಧಿ ಪಡಿಸಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.