ಕರ್ನಾಟಕದಲ್ಲಿ ಗರಿಷ್ಠ ವಿದೇಶಿ ನೇರ ಹೂಡಿಕೆ ಬರುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಶೇ.25 ರಷ್ಟಿದೆ.
ರಕ್ಷಣಾ ಕ್ಷೇತ್ರದಲ್ಲಿ ಶೇ.75 ರಷ್ಟು ಕೊಡುಗೆ ಈ ರಾಜ್ಯದ್ದು. ರಾಜ್ಯದ ಬಿಜೆಪಿ ಸರ್ಕಾರವು ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಿದೆ. ರೈತ ವಿದ್ಯಾನಿಧಿ ಮೂಲಕ ಲಕ್ಷಾಂತರ ಮಕ್ಕಳಿಗೆ ಪ್ರಯೋಜನವಾಗಿದೆ ಎಂದು ವಿವರಿಸಿದರು.
ಮೋದಿಜಿ ಅವರ 9 ವರ್ಷದ ಆಡಳಿತ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಮೂಲಕ ರಾಜ್ಯದ ಎಲ್ಲ ವರ್ಗದ ಜನತೆಯ ಸಶಕ್ತೀಕರಣ ಕಾರ್ಯ ನಡೆದಿದೆ. ಹಾಗಾಗಿ ಡಬಲ್ ಎಂಜಿನ್ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಬೇಕು ಎಂದರು.
ಕೋವಿಡ್ ಸಂದರ್ಭದಲ್ಲಿ ಮೋದಿಜಿ ಅವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಿಂದ 80 ಕೋಟಿ ಜನರು ಪ್ರಯೋಜನ ಪಡೆದರು. ಜನರು ಹಸಿವಿನಿಂದ ಸಾಯುವುದು ತಪ್ಪಿತು. ಆದರೆ ಪ್ಲೇಗ್ನಿಂದ ಬಹಳಷ್ಟು ಜನರು ಸತ್ತಿದ್ದರು ಎಂದು ನೆನಪಿಸಿದರು.