ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಹಿಂದೆ ಕೆಎಫ್‌ಡಿ ಹಾಗೂ ಪಿಎಫ್‌ಐ ಸಂಘಟನೆಯ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ವಿರೋಧ ಪಕ್ಷವಾಗಿ ನಾವು ಹೋರಾಟ ಮಾಡಲೇ ಬೇಕಾಗಿದೆ ಎಂದು ಹೇಳಿದರು.
ಹಾಡುಹಗಲೇ ರುದ್ರೇಶ್ ಹತ್ಯೆ ನಡೆದು ಮೂರು ದಿನ ಕಳೆದರು ಆರೋಪಿಯನ್ನು ಬಂಧಿಸಿಲ್ಲ. ಆರೋಪಿಗಳನ್ನು ಬಂಧಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.
ಆರ್‌ಎಸ್ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.