ದೇವೇಗೌಡರನ್ನು ಭೇಟಿಯಾದ ಮೇಯರ್, ಉಪಮೇಯರ್

ಶುಕ್ರವಾರ, 29 ಸೆಪ್ಟಂಬರ್ 2017 (12:57 IST)
ಬಿಬಿಎಂಪಿ ನೂತನ ಮೇಯರ್ ಸಂಪತ್‌ರಾಜ್ ಮತ್ತು ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ನಿವಾಸಕ್ಕೆ ಆಗಮಿಸಿದ ಮೇಯರ್ ಮತ್ತು ಉಪಮೇಯರ್‌ರನ್ನು ಬರಮಾಡಿಕೊಂಡ ದೇವೇಗೌಡರು, ಎರಡೂ ಪಕ್ಷಗಳ ನಾಯಕರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಕಿವಿಮಾತು ಹೇಳಿದರು.
 
ಬಿಬಿಎಂಪಿಯಲ್ಲಿ ಸಮನ್ವಯ ಸಮಿತಿ ರಚಿಸುವಂತೆ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದೇನೆ. ಅವರು ಯಾವಾಗ ರಚಿಸುತ್ತಾರೋ ಗೊತ್ತಿಲ್ಲ. ಶೀಘ್ರದಲ್ಲಿ ಸಮನ್ವಯ ಸಮಿತಿ ರಚಿಸಿ ಉತ್ತಮ ಕಾರ್ಯನಿರ್ವಹಿಸಲಿ ಎನ್ನುವುದೇ ನಮ್ಮ ಬಯಕೆ ಎಂದು ತಿಳಿಸಿದ್ದಾರೆ.
 
ಮಳೆಯಿಂದಾಗಿ ಬೆಂಗಳೂರಿನ ಜನತೆ ತಲ್ಲಣಿಸಿದ್ದಾರೆ. ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಜನತೆಯನ್ನು ಸಂಕಷ್ಟದಿಂದ ಪಾರುಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಲಹೆ ನೀಡಿದ್ದಾರೆ.    
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ