ಕಾಂಗ್ರೆಸ್ ಗೆ ಮೇಯರ್ : ಉಪಮೇಯರ್ ಜೆಡಿಎಸ್ ಮಡಿಲಿಗೆ

ಶನಿವಾರ, 17 ನವೆಂಬರ್ 2018 (20:23 IST)
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳು ಮತ್ತೊಮ್ಮೆ ಯಶಸ್ವಿಯಾಗಿದ್ದು, ಮೈಸೂರು ಪಾಲಿಕೆಯಲ್ಲಿ ಮೈತ್ರಿ ಪಕ್ಷಗಳು ಅಧಿಕಾರ ನಡೆಸಲಿವೆ.

ಮೈಸೂರು ನಗರಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ ನಡೆದ ಚುನಾವಣೆಯಲ್ಲಿ 11ನೇ ವಾರ್ಡಿನಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಪುಷ್ಪಲತ ಜಗನ್ನಾಥ್ ನೂತನ ಮೇಯರ್ ಆಗಿ ಹಾಗೂ 31ನೇ ವಾರ್ಡಿನಿಂದ ಆಯ್ಕೆಯಾಗಿರುವ ಜೆಡಿಎಸ್ ಷಪೀ ಆಹ್ಮದ್ ಉಪಮೇಯರ್ ಆಗಿ ಆಯ್ಕೆಯಾದರು.

ಮೇಯರ್ ಸ್ಥಾನಕ್ಕಾಗಿ ಕಾಂಗ್ರೆಸ್ ಪುಷ್ಪಲತಾ ಜಗನ್ನಾಥ್ ಹಾಗೂ ಉಪಮೇಯರ್ ಸ್ಥಾನಕ್ಕೆ ಜೆಡಿಎಸ್ನಿಂದ ಶಫಿ ಅಹ್ಮದ್ ನಾಮಪತ್ರ ಸಲ್ಲಿಸಿದ್ದರು. ಹಾಗೆಯೇ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಸುನಂದಾ ಪಾಲನೇತ್ರ ಹಾಗೂ ಉಪಮೇಯರ್ ಸ್ಥಾನಕ್ಕೆ ಸತೀಶ್ ಅವರಿಂದ ನಾಮಪತ್ರ ಸಲ್ಲಿಕೆಯಾಗಿದ್ದವು.

ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 22, ಕಾಂಗ್ರೆಸ್ 19, ಜೆಡಿಎಸ್ 18, ಬಿಎಸ್ಪಿ 1 ಹಾಗೂ 5 ಪಕ್ಷೇತರ ಸದಸ್ಯರಿದ್ದು, ಅತಂತ್ರ ಸ್ಥಿತಿ ನಿರ್ಮಾಣಗೊಂಡಿದೆ. ಸನ್ನಿವೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಧರ್ಮದಲ್ಲಿ ಅಧಿಕಾರ ಹಿಡಿಯಲು ಯಶಸ್ವಿಯಾದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ