ಹೆಲ್ಮೆಟ್‌ ಧರಿಸದೆ ಬುಲೆಟ್‌ ರೇಡ್ ಮಾಡುತ್ತಿದ್ದ ಎಂಸಿಎ ವಿದ್ಯಾರ್ಥಿನಿ ಹಂಪ್ಸ್‌ನಲ್ಲಿ ಬಿದ್ದು ಸಾವು

Sampriya

ಸೋಮವಾರ, 23 ಫೆಬ್ರವರಿ 2026 (14:47 IST)
Photo Courtesy X
ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಬಿದ್ದಿದ್ದು, ಪರಿಣಾಮ ಒಬ್ಬ  ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.  ಮತ್ತೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದರು. ಸ್ವಾತಿಗೆ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು.

ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್‌ನಲ್ಲಿ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರೂ ರಸ್ತೆಗೆ ಚಿಮ್ಮಿ ಬಿದ್ದಿದ್ದಾರೆ. ಹೆಲ್ಮೆಟ್‌ ಧರಿಸದ ಪರಿಣಾಮ ತಲೆಗೆ ಏಟು ಬಿದ್ದು ಪ್ರಿಯಾ ಮೃತಪಟ್ಟಿದ್ದಾಳೆ. ಸ್ವಾತಿ ಸ್ಥಿತಿ ಗಂಭೀರವಾಗಿದೆ. 

ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ