ಮತ್ತಿನಲ್ಲಿ ಹೆಂಡತಿ ಹೆದರಿಸಲು ತಾನೇ ಬೆಂಕಿ ಹಚ್ಚಿಕೊಂಡ ಪತಿ

ಗುರುವಾರ, 22 ಜೂನ್ 2023 (12:04 IST)
ತುಮಕೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿಯೊಂದಿಗೆ ಜಗಳವಾಡಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ತಂಗನಹಳ್ಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
 
ವಿನೋದ್ (35) ಬೆಂಕಿ ಹಚ್ಚಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕುಲ್ಲಕ ಕಾರಣಕ್ಕೆ ಗಂಡ ಹಾಗೂ ಹೆ0ಡತಿ ನಡುವೆ ಜಗಳವಾಗಿದೆ.

ಈ ವೇಳೆ ಹೆಂಡತಿಯನ್ನು ಹೆದರಿಸಲು ಬೈಕ್ನಲ್ಲಿದ್ದ ಪೆಟ್ರೋಲ್ ತೆಗೆದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಬಳಿಕ ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ