ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈಧ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಎಸ್.ಪಿ.ಕುಲಕರ್ಣಿ ಅವರ ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ. ಸರಕಾರದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೆಇಎ ಇಲಾಖೆಯಲ್ಲಿ ಮಾಜಿ ಆಡಳಿತಾಧಿಕಾರಿಯಿಂದ ನಡೆದ ಭ್ರಷ್ಟಾಚಾರದ ಕುರಿತು ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್, ನಾನು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದೇನೆ ಎಂದು ಹೇಳುವ ಹಕ್ಕು ನಿಮಗಿಲ್ಲ ಎಂದು ಪತ್ರಕರ್ತರ ಮೇಲೆ ಗರಂ ಆದರು.