ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣ
ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ನೀಡುವುದಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ವಿಶ್ವ ಆರೋಗ್ಯ ದಿನವನ್ನುದ್ದೇಶಿಸಿ ಮಾತನಾಡಿರುವ ಅವರು, ಕಳೆದ 8 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕ್ಷಿಪ್ರ ಬದಲಾವಣೆಯಾಗಿದೆ. ಹಲವಾರು ಹೊಸ ವೈದ್ಯಕೀಯ ಕಾಲೇಜುಗಳು ತಲೆ ಎತ್ತಿದ್ದು, ಸ್ಥಳೀಯ ಭಾಷೆಗಳಲ್ಲೇ ವೈದ್ಯಕೀಯ ಅಧ್ಯಯನವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಇದು ಅಸಂಖ್ಯಾತ ಯುವ ಸಮೂಹದ ಆಕಾಂಕ್ಷಿಗಳಿಗೆ ತಳಹದಿ ಹಾಕಿಕೊಡಲಿದೆ ಎಂದು ಆಶ್ವಾಸನೆ ನೀಡಿದ್ದಾರೆ.