ಬೀದಿಗಿಳಿದು ಪ್ರತಿಭಟನೆ ನಡೆಸಿದ ಮೆಡಿಕಲ್ ವಿದ್ಯಾರ್ಥಿಗಳು

ಬುಧವಾರ, 24 ಅಕ್ಟೋಬರ್ 2018 (23:12 IST)
ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದಿರುವ ಕ್ರಮ ಖಂಡಿಸಿದರು.

ದಾವಣಗೆರೆಯಲ್ಲಿ ವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.
ಜಿಲ್ಲಾಸ್ಪತ್ರೆಯ ಮುಂಭಾಗ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು, 8 ತಿಂಗಳಿನಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದು ಕಿಂಚಿತ್ತು ಸರ್ಕಾರ ಕಾಳಜಿ ವಹಿಸುತ್ತಿಲ್ಲ ಅಂತ ಆರೋಪ ಮಾಡಿದ್ರು.

ಸರ್ಕಾರಿ ಕೋಟದಲ್ಲಿ ಆಯ್ಕೆಯಾದ ಜಿಲ್ಲೆಯ 230 ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವೇತನ ವಿಲ್ಲದಿದ್ದರು ರೋಗಿಗಳ ಆರೈಕೆ ಮಾಡ್ತಿದ್ದಾರೆ. ರೋಗಿಗಳಿಗೆ ತೊಂದರೆ ಯಾಗದಂತೆ ಕೆಲಸ ಮಾಡಿದ್ರು ಸರ್ಕಾರ ಸ್ಪಂದಿಸಿಲ್ಲ‌.

ಇದ್ರಿಂದ ವೈದ್ಯ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ ಅಂತ ಪ್ರತಿಭಟನ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನಾದರು,  ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುವಂತೆ ವಿದ್ಯಾರ್ಥಿಗಳು ಘೋಷಣೆಗಳನ್ನ ಕೂಗುತ್ತಾ ಆಗ್ರಹಿಸಿದ್ರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ