ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ

Sampriya

ಗುರುವಾರ, 20 ಫೆಬ್ರವರಿ 2025 (17:57 IST)
Photo Courtesy X
ಬೆಂಗಳೂರು: ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್​ಎಸ್​ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 1989ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಫ್​ಎಸ್​ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಅವರನ್ನು ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೂಲತಃ ಉತ್ತರಾಖಂಡದವರಾಗಿರುವ ಮೀನಾಕ್ಷಿ ನೇಗಿ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಆ ಸೇವೆಯಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದೀಗ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

ಕಳೆದ 2 ವರ್ಷಗಳಿಂದ ಅವರು ಕೇಂದ್ರ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಮೀನಾಕ್ಷಿ ನೇಗಿ ಅವರ ಪತಿ ವಿಜಯ ಶರ್ಮಾ ಕೂಡ ಕರ್ನಾಟಕ ಕೇಡರ್​ನ ಐಎಫ್​ಎಸ್​ ಅಧಿಕಾರಿಯಾಗಿದ್ದರು ಮತ್ತು ಕಳೆದ ಜನವರಿಯಲ್ಲಿ ಸೇವೆಯಿಂದ ನಿವೃತ್ತರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ