ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ

ಗುರುವಾರ, 22 ಮಾರ್ಚ್ 2018 (11:16 IST)
ಬೆಂಗಳೂರು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ(ಇಂದು) ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆಯೊಂದನ್ನು ಕರೆಯಲಾಗಿದೆ.


ಇಂದು ಸಂಜೆ 5 ಗಂಟೆಗೆ ಈ ಸಭೆ ನಡೆಯಲಿದ್ದು, ಇದರಲ್ಲಿ ರಾಜ್ಯದ ಎಲ್ಲಾ ಲೋಕಸಭೆ, ರಾಜ್ಯಸಭೆ ಸದಸ್ಯರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಭಾಗವಹಿಸುವಂತೆ ಆಹ್ವನ ನೀಡಲಾಗಿದೆ.


ಈ ಸಭೆಯಲ್ಲಿ ಫೆ.16ರಂದು ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಚರ್ಚೆ ನಡೆಸುಲಾಗುತ್ತದೆ. ಅದರಂತೆ ಕಾವೇರಿ ನದಿ ನೀರು ಹಂಚಿಕೆಗೆ  ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವ ನಿಲುವನ್ನು ತೆಗೆದುಕೊಳ್ಳಬೇಕು. ಕಾನೂನು ತಜ್ಞರು ನೀಡಿರುವ ಸಲಹೆಗಳು ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ತೀರ್ಪನ್ನು ಮರು ಪರಿಶೀಲಿಸುವಂತೆ ಅರ್ಜಿ ಸಲ್ಲಿಸುವುದರಿಂದ ಆಗುವ ಸಾಧಕ ಬಾಧಕಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ