ಒಬಿಸಿ ಮೀಸಲಾತಿ ಸ್ಥಿತಿಗತಿ ಚರ್ಚಿಸಲು ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಶನಿವಾರ, 12 ಫೆಬ್ರವರಿ 2022 (20:51 IST)
ಬೆಂಗಳೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅದರ ಪರಿಣಾಮಗಳೇನು ಹಾಗೂ ರಾಜ್ಯದ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಉಳಿಸಿಕೊಂಡು ಚುನಾವಣೆಯನ್ನು ಯಾವ ರೀತಿ ಮಾಡಬೇಕೆಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.