ಮೆಗ್ಗಾನ್ ಘಟನೆ ಸಿಎಂ ಲಘುವಾಗಿ ಪರಿಗಣಿಸಬಾರದು: ಕುಮಾರಸ್ವಾಮಿ
ಶುಕ್ರವಾರ, 2 ಜೂನ್ 2017 (15:47 IST)
ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಅಮಾನವೀಯ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಬೇಕು. ಉಡಾಫೆ ಉತ್ತರ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜನ ನನ್ನನ್ನು ಬೆಂಬಲಿಸ್ತಾರೆ ಎನ್ನುವ ದುರಂಹಕಾರ ಸಿಎಂ ಸಿದ್ದರಾಮಯ್ಯ ಅವರಿಗಿದೆ. ಆದ್ದರಿಂದ ಇಂತಹ ವರ್ತನೆ ತೋರುತ್ತಿರುತ್ತಾರೆ. ಜನತೆ ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಡಳಿತವನ್ನು ಬಿಗಿಯಾಗಿಟ್ಟುಕೊಳ್ಳಬೇಕು. ಅಧಿಕಾರಿಗಳ ಮೇಲೆ ಅಂಕುಶ ಹಾಕಬೇಕು. ಹಿಂದೆ ಸರಕಾರದ ಬಗ್ಗೆ ಚಾಟಿ ಬೀಸುತ್ತಿದ್ದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕೂಡಾ ಮೌನವಹಿಸಿರುವುದು ನಿಜಕ್ಕೂ ಶೋಚನೀಯ ಸಂಗತಿ ಎಂದರು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೆಲ ಸಿಬ್ಬಂದಿಗಳನ್ನು ಅಮಾನತುಗೊಳಿಸಿದ್ರೆ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ. ಪ್ರತಿಯೊಬ್ಬ ರೋಗಿಗೆ ಅತ್ಯುತ್ತಮ ಚಿಕಿತ್ಸೆ ದೊರಕಿಸಿ ಕೊಡುವ ನಿಟ್ಟಿನಲ್ಲಿ ಸರಕಾರ ಮುಂದಾಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.