ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಬೇಕಾದರೆ ವಿಸ್ತೃತ ಯೋಜನಾ ವರದಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮುಂದಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ವಿಷಯದ ಬಗ್ಗೆ ಚರ್ಚೆ ಮಾಡಿ ಒಪ್ಪಿಗೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಕೇಂದ್ರ ಜಲಸಂಪನ್ಮೂಲ ಇಲಾಖೆ ಮುಂದಿನ ಸಭೆಯಲ್ಲಿ ಮೇಕೆದಾಟು ಡಿಪಿಆರ್ ವಿಚಾರವನ್ನು ಸಭೆಯ ಅಜೆಂಡಾಗೆ ಸೇರಿಸುವ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಹೊಸ ವರಸೆ ಶುರುಮಾಡಿದೆ.