ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆಗೆ ಗುತ್ತಿಗೆದಾರರು ಮನವಿ ಮಾಡಿದ್ದು,ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇರುತ್ತದೆ.ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ.ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಗುತ್ತಿಗೆದಾರರು ಅಳಲು ತೋಡಿಕೊಂಡಿದ್ದಾರೆ.ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ತಂದಿದ್ದಾರೆ.