ಮೇಟಿ ರಾಸಲೀಲೆ ಪ್ರಕರಣದ ಹಿಂದೆ ಪಿತೂರಿ: ದಿನೇಶ್ ಗುಂಡೂರಾವ್

ಬುಧವಾರ, 14 ಡಿಸೆಂಬರ್ 2016 (19:09 IST)
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದ ಹಿಂದೆ ಪಿತೂರಿ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ.
 
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ರಾಜ್ಯ ಸರಕಾರಕ್ಕಾಗಲಿ ಅಥವಾ ಪಕ್ಷಕ್ಕಾಗಲಿ ಸಂಬಂಧಿಸಿಲ್ಲ. ಎಚ್.ವೈ.ಮೇಟಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು.
 
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದ ಹಿಂದೆ ಖಂಡಿತಾ ಪಿತೂರಿ ನಡೆದಿದೆ. ಮತ್ತೊಬ್ಬರ ವೈಯಕ್ತಿಕ ವಿಚಾರಗಳನ್ನು ಚಿತ್ರೀಕರಿಸುವುದು ತಪ್ಪು. ಯಾರು ಮತ್ತು ಯಾವ ಉದ್ದೇಶದಿಂದ ರಾಸಲೀಲೆಯ ಚಿತ್ರೀಕರಣ ಮಾಡಿದ್ದಾರೆ ಎಂದು ತಿಳಿಯಬೇಕಿದೆ. ಪ್ರಕರಣ ಕುರಿತು ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಭರವಸೆ ನೀಡಿದರು. 
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ಇಂದು ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ