ಮೇಟಿ ಸ್ಥಾನಕ್ಕೆ ಸದ್ಯಕ್ಕೆ ನೇಮಕವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಶುಕ್ರವಾರ, 16 ಡಿಸೆಂಬರ್ 2016 (18:52 IST)
ಎಚ್.ವೈ.ಮೇಟಿ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಸದ್ಯ ಯಾರ ನೇಮಕವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 
 
ರಾಜಭವನದ ಬಳಿ ಇರುವ ಸೈನಿಕರ ಸ್ಮಾರಕ ಸ್ಥಳದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ವೈ.ಮೇಟಿ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಸದ್ಯ ಯಾರ ನೇಮಕವೂ ಇಲ್ಲ. ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ನನ್ನ ಬಳಿ ಯಾರು ಬಂದಿಲ್ಲ ಎಂದರು. 
 
ರಾಜ್ಯದಲ್ಲಿ ಯಾರ ಮನೆ ಮೇಲೆ ಐಟಿ ದಾಳಿ ನಡೆಯುತ್ತದೆಯೋ ಅವರೆಲ್ಲ ಸಿದ್ದರಾಮಯ್ಯ ಅವರ ಆಪ್ತರೆಂದು ಏಕೆ ಬಿಂಬಿಸುತ್ತೀರಾ? ಬಿಜಿಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರೆಂದು ಏಕೆ ಹೇಳುವುದಿಲ್ಲ ಎಂದು ಪ್ರಶ್ನಿಸಿದರು. 
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ