ಮೇಟಿ ರಾಸಲೀಲೆ ಪ್ರಕರಣ: ಸೋನಿಯಾ ಗಾಂಧಿಗೆ ದೂರು ಸಲ್ಲಿಕೆ

ಶುಕ್ರವಾರ, 16 ಡಿಸೆಂಬರ್ 2016 (14:54 IST)
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ದೂರು ಸಲ್ಲಿಸಿದ್ದಾರೆ.
 
ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ನವದೆಹಲಿಯ ಜನಪಥ್ ರಸ್ತೆಯ ನಿವಾಸಕ್ಕೆ ತೆರಳಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಸಿಬ್ಬಂದಿ ಮೂಲಕ ದೂರು ನೀಡಿದ್ದಾರೆ.
 
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಿಡಿ ಬಿಡಗಡೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ತಮಗೆ ಜೀವ ಬೆದರಿಕೆ ಇದೆ. ಹೀಗಾಗಿ ತಮಗೆ ಸೂಕ್ತ ಭದ್ರತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಮನವಿ ಮಾಡಿಕೊಂಡಿದ್ದಾರೆ.
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ