ಮೆಟ್ರೋ ರೈಲು ಸಂಚಾರದಲ್ಲಿ ಕೊಂಚ ಬದಲಾವಣೆ

ಶುಕ್ರವಾರ, 24 ಜೂನ್ 2022 (20:38 IST)
ಬೆಂಗಳೂರು ಮೆಟ್ರೋ ರೈಲು ನಿಗಮವು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ  ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು  ನಾಳೆ ರಾತ್ರಿ 09.30 ರಿಂದ ಸಂಚಾರವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇರಳೆ ಮಾರ್ಗದ ಕೊನೆಯ ಮೆಟ್ರೋ ರೈಲು ಸೇವೆಯು ಕೆಂಗೇರಿ ಮಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ, ಕಡೆಗೆ ರಾತ್ರಿ 8.40 ಗಂಟೆಗೆ ಹೊರಡಲಿದೆ ಮತ್ತು ಬೈಯಪ್ಪನಹಳ್ಳಿಯಿಂದ ಕೆಂಗೇರಿ  ಕಡಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 09.30 ಗಂಟೆಗೆ ಲಭ್ಯವಿರುತ್ತದೆ. ಮೆಜೆಸ್ಟಿಕ್ ನಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ಸೇವ ರಾತ್ರಿ 9.10 ಗಂಟೆಯವರೆಗೆ ಲಭ್ಯವಿರುತ್ತದೆ. ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮಟ್ರೋ ನಿಲ್ದಾಣಗಳ ನಡುವೆ ರಾತ್ರಿ 9.30 ಗಂಟೆಯಿಂದ ರಾತ್ರಿ 11.00 ಗಂಟೆಯವರೆಗೆ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತದೆ. ಇನ್ನೂ ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ, ಯಾವುದೇ ವ್ಯತ್ಯಾಸವಿರುವುದಿಲ್ಲ ಮತ್ತು ವೇಳಾಪಟ್ಟಿಯ ಪ್ರಕಾರ ಸೇವೆ ಲಭ್ಯವಿರುತ್ತದೆ. ಭಾನುವಾರದಂದು ಮೆಟ್ರೋ ರೈಲು ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಿಗೆ, 7.00 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ಪುನರಾರಂಭವಾಗಲಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ