ಮೆಟ್ರೋ ನಿಲ್ದಾಣಕ್ಕೆ ಬಸವಣ್ಣನ ಹೆಸರು
ಮೆಟ್ರೋ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರಿಡಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ. ಬೆಂಗಳೂರಿನ ಪ್ರಮುಖ ಸ್ಥಳ, ನಿಲ್ದಾಣಗಳಿಗೆ ಈಗಾಗಲೇ ಪ್ರಸಿದ್ದ ಹೆಸರುಗಳ ನಾಮಕರಣ ಮಾಡಲಾಗಿದೆ. ಇದೀಗ ಮೆಟ್ರೋ ನಿಲ್ದಾಣಕ್ಕೆ ಬಸವಣ್ಣನವರ ಹೆಸರಿಡಬೇಕೆಂದು ಒತ್ತಾಯ ಬಂದಿದೆ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಸದಸ್ಯರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ