ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸಂಚಾರ ಸ್ಥಗಿತ

ಶನಿವಾರ, 4 ಡಿಸೆಂಬರ್ 2021 (19:49 IST)
ಬೆಂಗಳೂರು: ನೇರಳ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ನಡೆಸಬೇಕಾಗಿದ್ದು, ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಶನಿವಾರ ಸಂಜೆ 5 ರಿಂದ ಭಾನುವಾರ ಬೆಳಗ್ಗೆ 7 ರವರೆಗೆ ವಾಣಿಜ್ಯ ಸೇವೆ ಸ್ಥಗಿತಗೊಳಿಸಲಾಗಿದೆ.
 
ಈ ಅವಧಿಯಲ್ಲಿ ಪ್ರಯಾಣಿಕರಿಗೆ ಮೆಟ್ರೋ ಸೇವೆಯು ವೇಳಾಪಟ್ಟಿಯ ಪ್ರಕಾರ ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ. ಭಾನುವಾರದಂದು ಮೆಟ್ರೋ ಸೇವೆಯು ಸಂಪೂರ್ಣ ನೇರಳ ಮಾರ್ಗದಲ್ಲಿ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ಪುನರಾರಂಭಿಸಲಾಗುತ್ತದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ