ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹಸಚಿವರಿಗೆ ಮಾಂಗಲ್ಯ ಸರ ಪೋಸ್ಟ್

Krishnaveni K

ಶುಕ್ರವಾರ, 24 ಜನವರಿ 2025 (10:30 IST)
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚಾಗುತ್ತಿದ್ದು, ಮಹಿಳೆಯೊಬ್ಬರು ತಮ್ಮ ಮಾಂಗಲ್ಯ ಸರವನ್ನು ಗೃಹಸಚಿವರಿಗೆ ಪೋಸ್ಟ್ ಮಾಡಿದ್ದಾರೆ.

ಮೈಕ್ರೋ ಫೈನಾನ್ಸ್ ಸಂಸ್ಥೆ ಕಾಟದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ದಿಕ್ಕು ಕಾಣದ ಪತ್ನಿ ನ್ಯಾಯ ಕೊಡಿಸಿ ಎಂದು ಗೃಹಸಚಿವರಿಗೇ ತಮ್ಮ ಮಾಂಗಲ್ಯ ಸರವನ್ನು ಪೋಸ್ಟ್ ಮಾಡಿ ವಿನೂತನವಾಗಿ ಆಕ್ರೋಶ ಹೊರಹಾಕಿದ್ದಾರೆ.

ರಾಯಚೂರನ ಶರಣಬಸವ ಎಂಬ 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿವಿಧ ಫೈನಾನ್ಸ್ ಗಳಲ್ಲಿ ಸುಮಾರು 8 ಲಕ್ಷ ರೂ.ಗಳಷ್ಟು ಸಾಲ ಮಾಡಿಕೊಂಡಿದ್ದ ಶರಣಬಸವ ಕಿರುಕುಳ ತಾಳಲರಾದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ದುಡಿಯುತ್ತಿದ್ದ ಪತಿಯನ್ನು ಕಳೆದುಕೊಂಡು ಪತ್ನಿ ತಮ್ಮ ಮಕ್ಕಳನ್ನು ಸಾಕುವುದು ಹೇಗೆ ಎಂದು ತಿಳಿಯದೇ ಕಂಗಾಲಾಗಿದ್ದಾಳೆ.

ಹೀಗಾಗಿ ಗೃಹಸಚಿವರಿಗೆ ನ್ಯಾಯಕ್ಕಾಗಿ ಪತ್ರ ಬರೆದಿದ್ದು, ಅದರ ಜೊತೆಗೆ ಮಾಂಗಲ್ಯವನ್ನೂ ಇಟ್ಟು ಶರಣಬಸವ ಪತ್ನಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಗೃಹಸಚಿವರು, ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ನಮ್ಮ ಗಮನಕ್ಕೆ ಬಂದಿದೆ. ಸಾಲ  ವಸೂಲಾತಿಗೆ ಆಸ್ತಿ ಮಟ್ಟುಗೋಲು ಹಾಕುವುದು, ಕಿರುಕುಳ ನೀಡುವುದು ಕಾನೂನು ಪ್ರಕಾರ ತಪ್ಪು. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇನ್ನು, ಸಿಎಂ ಸಿದ್ದರಾಮಯ್ಯ ಗಮನಕ್ಕೂ ಈ ವಿಚಾರ ಬಂದಿದ್ದು, ಸಮಸ್ಯೆ ಬಗೆಹರಿಸಲು ನಾಳೆ ಅಧಿಕಾರಿಗಳ ಜೊತೆ ಸಭೆ ಕರೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ