ಹಾಸನ ಉಪ ವಿಭಾಗಾಧಿಕಾರಿ ಇ.ವಿಜಯಾ ಅವರ ಆರೋಗ್ಯ ವಿಚಾರಿಸಿಕೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ವಿಜಯಾ ಅವರಿಗೆ ನಾನು ಯಾವುದೇ ತರಹದ ಕಿರುಕುಳ ನೀಡಿಲ್ಲ. ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಹತಾಶಯರಾಗಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಿಂದ ಸತ್ಯಾಸತ್ಯತೆ ತಿಳಿದು ಬರಲಿದೆ ಎಂದು ಹೇಳಿದರು.
ಕೆಲವು ದಿನಗಳ ಹಿಂದ ವರ್ಗಾವಣೆ ಹೊಂದಿದ್ದ ಇ.ವಿಜಯಾ ಅವರು ಕೆಎಟಿ ಮೊರೆ ಹೋಗಿ, ತಡೆಯಾಜ್ಞೆ ಪಡೆದುಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದರು. ಅಷ್ಟರಲೇ ಅವರ ಸ್ಥಾನಕ್ಕೆ ಸರಕಾರ ಬೇರೆ ಅಧಿಕಾರಿಯನ್ನು ನೇಮಕ ಮಾಡಿದ್ದರಿಂದ ಬಿಕ್ಕಟ್ಟು ಉಂಟಾಗಿತ್ತು. ಈ ಕುರಿತು ಕಛೇರಿಯ ಎದುರು ಪ್ರತಿಭಟನೆಯೂ ನಡೆದಿತ್ತು. ಈ ಬೆಳವಣಿಗೆಯಿಂದ ಬೇಸತ್ತು ವಿಜಯಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು.