ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ !

ಮಂಗಳವಾರ, 6 ಡಿಸೆಂಬರ್ 2022 (08:24 IST)
ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಡಿಸಿ ನಿತೇಶ್ ಪಾಟೀಲ್, ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ಸಿಆರ್ಪಿಸಿ 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ಮಾಡಿದ್ದಾರೆ.

ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್, ಶಂಭುರಾಜ್ ದೇಸಾಯಿ ಹಾಗೂ ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ್ ಮಾನೆಗೆ ನಿಷೇಧ ಹೊರಡಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ