ಈ ಬಗ್ಗೆ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು,’ ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ. ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕು’ ಎಂದು ಹೇಳಿದ್ದಾರೆ.
‘ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ’ ಎಂದು ಕೇರಳ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.