ಕೆಲ ದಿನಗಳ ಹಿಂದೆ ಸರಕಾರ ಶಾಲೆಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಎಚ್. ಆಂಜನೇಯ, ಖಾಸಗಿ ಶಾಲೆಗಳು ಶಿಕ್ಷಣವನ್ನು ವ್ಯಾಪಾರಿಕರಣ ಮಾಡಿಕೊಂಡಿವೆ ಎಂದು ಟೀಕಿಸಿದ್ದರು. ಸರಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಹಣಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡಿಗಿಂತಲೂ ಕಡೆಯಾಗಿದೆ ಎಂದು ಹೇಳಿಕೆ ನೀಡಿದ್ದರು.
ರಾಜ್ಯ ಸರಕಾರದ ಸಚಿವರು ಇಂತಹ ಕೀಳು ಮಟ್ಟದ ಹೇಳಿಕೆ ನೀಡುವುದು ಅಸಮಂಜಸ, ಎಚ್. ಆಂಜನೇಯ ಯಾವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ ತಿಳಿಯದು. ತಮ್ಮ ಹೇಳಿಕೆಯ ಕುರಿತು ಸ್ಪಷ್ಟಪಡಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್ ನಿನ್ನೆಯಷ್ಟೇ ಆಂಜನೇಯ ಅವರಿಗೆ ಪತ್ರ ಬರೆದಿದ್ದರು.