ಸಿಎಂ ಎದುರೇ ವೇದಿಕೆಯಲ್ಲೇ ಸಚಿವ ಅಶ್ವತ್ಥ ನಾರಾಯಣ​- ಸಂಸದ ಡಿ.ಕೆ. ಸುರೇಶ್​ ಜಟಾಪಟಿ

ಸೋಮವಾರ, 3 ಜನವರಿ 2022 (20:12 IST)
ರಾಮನಗರದಲ್ಲಿ ನಾನಾ ಅಭಿವೃದ್ಧಿ ಕಾರ್ಯಕ್ರಮಗಳ ಅನಷ್ಠಾನಕ್ಕಾಗಿ ಸೋಮವಾರ (ಜನವರಿ 3) ಆಯೋಜಿಸಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ಮಧ್ಯೆ ನಡೆದ ತೀವ್ರ ವಾಗ್ವಾದ ನಡೆದು ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖದಲ್ಲೇ ರಾದ್ಧಾಂತ ಸೃಷ್ಟಿಯಾಗಿ ನಂತರ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ ಧರಣಿ ಕುಳಿತು ಪ್ರಸಂಗ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಬಳಿಕ ವೇದಿಕೆಯಲ್ಲಿ ಡಿ.ಕೆ ಸುರೇಶ್ ಬೆಂಬಲಿಗರು ಮುಖ್ಯಮಂತ್ರಿ ಎದುರೇ ಸಚಿವ ಅಶ್ವತ್ಥ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ.
ಸಚಿವ ಡಾ.ಅಶ್ವತ್ಥ್ ಭಾಷಣಕ್ಕೆ ಸಂಸದ ಡಿ.ಕೆ.ಸುರೇಶ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ ನಡೆಯುತ್ತದೆ. ‘ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ ಎಂದು ಅಶ್ವತ್ಥ್ ನಾರಾಯಣ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ನೀರಾವರಿ ಯೋಜನೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ನಾವು ನಮ್ಮ ಅಭಿವೃದ್ಧಿ ಮಾತ್ರ ಮಾಡಿಕೊಳ್ಳುವುದಿಲ್ಲ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ದರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿಲ್ಲ. ತಮ್ಮ ಸರ್ಕಾರದಲ್ಲೇ ಯೋಜನೆಗಳನ್ನು ರೂಪಿಸಿ ತಮ್ಮ ಅವಧಿಯಲ್ಲಿಯೇ ಸಂಪೂರ್ಣಗೊಳಿಸುತ್ತೇವೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳುತ್ತಿದ್ದಂತೆಯೇ ಸಿಟ್ಟಾದ ವೇದಿಕೆಯಲ್ಲಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವ ಅಶ್ವತ್ಥ್ ನಾರಾಯಣ ಜತೆ ಡಿ.ಕೆ.ಸುರೇಶ್ ವಾಗ್ವಾದ ನಡೆದಿದೆ. ಆಗ ಸಂಸದ ಡಿ.ಕೆ.ಸುರೇಶ ವೇದಿಕೆಯಲ್ಲಿಯೇ ಧರಣಿ ಕುಳಿತಿದ್ದಾರೆ.
ಇದರಿಂದ ಆಕ್ರೋಶಗೊಂಡ ಅಶ್ವತ್ಥ ನಾರಾಯಣ, ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಗೌರವ ತೋರುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದು ಗಲಾಟೆ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪೊಲೀಸರು ಮಧ್ಯೆ ಬಂದರು. ವಿಧಾನ ಪರಿಷತ್‌ ಸದಸ್ಯ ರವಿ ಸಚಿವ ಅಶ್ವತ್ಥ ನಾರಾಯಣ ಮಾತಾಡುತ್ತಿದ್ದ ಮೈಕ್​ ಕಿತ್ತುಕೊಂಡು, ಕೈ-ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆಯಿತು. ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಮಧಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಗಲಾಟೆ ನಡುವೆ ಮಾತನಾಡಿದ ಅವರು, ನಾನು ಅಭಿವೃದ್ಧಿ ಮಾಡಲು ಬಂದಿದ್ದೇನೆ. ದಯವಿಟ್ಟು ಗಲಾಟೆ ಮಾಡಬೇಡಿ ಎಂದು ವಿನಂತಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ