ಒಂದು ವಾರ ಕ್ವಾರಂಟೈನ್ ಆದ ಸಚಿವ ಬಿ.ಸಿ.ಪಾಟೀಲ್
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅವರ ಜೊತೆ ಸಂಪರ್ಕದಲ್ಲಿದ್ದ ನಾನು ಮತ್ತು ನನ್ನ ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.