ಜನಾರ್ಧನ ರೆಡ್ಡಿ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲ್ಲ: ಸಚಿವ ಡಿಕೆಶಿ ಸ್ಪಷ್ಟನೆ

ಗುರುವಾರ, 8 ನವೆಂಬರ್ 2018 (13:20 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ. ಸಿಸಿಬಿ ಅಧಿಕಾರಿಗಳು ಮೊದಲಿನಿಂದಲೂ ಪ್ರಕರಣದ ಬಗ್ಗೆ ಸಾಕ್ಷ್ಯ ಸಂಗ್ರಹಿಸುತ್ತಿದ್ದರು. ಈಗ ಬಂಧನಕ್ಕೆ ಬಲೆ ಬೀಸಿದ್ದಾರೆ. ಆದರೆ ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಪ್ರಕರಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಾರೆ. ಪ್ರಕರಣದ ಬಗ್ಗೆ ನಮಗೆ ಮಾಹಿತಿಯಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಇನ್ನೊಂದೆಡೆ ಜನಾರ್ಧನ ರೆಡ್ಡಿಗಾಗಿ ತೀವ್ರ ಶೋಧ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು ಅವರ ಮನೆಯಲ್ಲೇ ಬೀಡು ಬಿಟ್ಟಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ರೆಡ್ಡಿ ನಿವಾಸದಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ