ಇಂಗ್ಲಿಷ್ ಕಲಿಕೆ ಅನಿವಾರ್ಯ ಎಂದ ಶಿಕ್ಷಣ ಸಚಿವ

ಸೋಮವಾರ, 25 ಜೂನ್ 2018 (19:29 IST)
ಅನ್ನಕೊಡುವ ಭಾಷೆ ಇಂಗ್ಲಿಷ್. ಆಧುನಿಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ ಅಂಗವಾಗಿ ಬಹುಜನ ವಿದ್ಯಾರ್ಥಿ ಸಂಘವು ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಿಸಿ ಕ್ಯಾಮೆರಾ ಹಾಗೂ ಪೊಲೀಸ್ ನಡುವೆ ಎಕ್ಸಾಮ್ ಬರೆಯುವ ವಿದ್ಯಾರ್ಥಿಗಳು ಕ್ರಿಮಿನಲ್‍ಗಳು ಎಂಬಂತಾಗಿದೆ. ಆದ್ದರಿಂದ ರಾಜ್ಯದಲ್ಲಿ ಓಪನ್ ಬುಕ್ ಎಕ್ಸಾಮ್ ತರಬೇಕೆಂದು ಚಿಂತನೆ ನಡೆಸಲಾಗುತ್ತಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ