ಸಚಿವ ಎಂ.ಬಿ ಪಾಟೀಲ್‌ಗೆ ಬುದ್ದಿ ಭ್ರಮಣೆ: ಶಾಮನೂರು ಕಿಡಿ

ಸೋಮವಾರ, 6 ನವೆಂಬರ್ 2017 (16:22 IST)
ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮಿಗಳ ಹೇಳಿಕೆ ಸಮರ್ಥಿಸಿಕೊಳ್ಳುತ್ತಿರುವ ಸಚಿವ ಎಂ.ಬಿ.ಪಾಟೀಲ್‌ಗೆ ಬುದ್ದಿ ಭ್ರಮಣೆಯಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ.
ಜಯಮೃತ್ಯುಂಜಯ ಸ್ವಾಮಿಗಳು ಹಿಡಿತದಿಂದ ಮಾತನಾಡಿದ್ದರೆ ಇಂತಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ಶ್ರೀಗಳ ಹೇಳಿಕೆಯಿಂದ ತುಂಬಾ ಅಸಮಾಧಾನವಾಗಿದೆ ಎಂದು ತಿಳಿಸಿದ್ದಾರೆ.
 
ಇದೀಗ ಶ್ರೀಗಳ ಹೇಳಿಕೆಯನ್ನು ತಿರುಚಲಾಗುತ್ತಿದೆ. ನಾಲ್ಕಾರು ಜನರು ಸೇರಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಹೊಸದಾಗಿ ಲಿಂಗಾಯುತ ಎನ್ನುವ ಬಿರುದು ಪಡೆದುಕೊಳ್ಳಲು ಇಂತಹ ವರ್ತನೆ ತೋರುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ವೀರಶೈವ ಮತ್ತು ಲಿಂಗಾಯುತ ಮುಖಂಡರು ಒಂದು ಕಡೆ ಕುಳಿತು ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಲಿದ್ದಾರೆ ಎಂದು  ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ