ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆ ಮೇ ನಲ್ಲಿ ಪಕ್ಕಾ ಎಂದ ಸಚಿವ

ಗುರುವಾರ, 9 ಏಪ್ರಿಲ್ 2020 (20:25 IST)
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಮೇ ನಲ್ಲಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಹೇಳಿದ್ದಾರೆ.

ಕೊರೊನಾ ವೈರಸ್ ಭೀತಿ ಹಾಗೂ ಲಾಕ್ ಡೌನ್ ನಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿತ್ತು.

ಶೀಘ್ರವೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಎಲ್ಲಾ ಜಿಲ್ಲೆಗಳ ಡಿಡಿಪಿಐಗಳ ಸಭೆ ಕರೆಯಲಾಗಿದ್ದು, ಆ ಸಭೆಯಲ್ಲಿ ಪರೀಕ್ಷೆ ನಡೆಸುವ ದಿನಾಂಕ ಪಕ್ಕಾ ಮಾಡೋದಾಗಿ ಸಚಿವರು ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ