ರಾಸಲೀಲೆ ಆರೋಪಿ ಸಚಿವ ಮೇಟಿಯಿಂದ ಪರಮೇಶ್ವರ್ ಭೇಟಿ

ಮಂಗಳವಾರ, 13 ಡಿಸೆಂಬರ್ 2016 (12:59 IST)
ರಾಸಲೀಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ಇಂದು ಮುಂಜಾನೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಪ್ರಕರಣದ ಕುರಿತು ವಿವರಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
ವರ್ಗಾವಣೆ ವಿಚಾರವಾಗಿ ಮಾತನಾಡಲು ಬಂದ ಮಹಿಳೆಯ ಮೇಲೆ ಸಚಿವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದ್ದು, ಇದರ ವಿಡಿಯೋ ಸಿಡಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಬಳಿಯಿದೆ ಎಂದು ರಾಜ್ಯಾದ್ಯಂತ ಸುದ್ದಿಯಾಗಿತ್ತು. 
 
ಸಾಕ್ಷ್ಯ ಇರುವ ಸಿಡಿ ಬಿಡುಗಡೆ ಮಾಡಿದರೆ ಸಚಿವರ ವಿರುದ್ಧ ಕ್ರಮ ಎಂದ ಸಿಎಂ
 
ಅಬಕಾರಿ ಸಚಿವ ಎಚ್.ವೈ.ಮೇಟಿ ಅವರ ರಾಸಲೀಲೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಕ್ಷ್ಯ ಇರುವ ಸಿಡಿ ಬಿಡುಗಡೆ ಮಾಡಿದರೆ ತಕ್ಷಣವೇ ಸಚಿವರ ವಿರುದ್ಧ ಕ್ರಮ ಕೈಗೊಳ್ಳತ್ತೇನೆ ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ