ಮಹಾರಾಷ್ಟ್ರ ಸಿಎಂ ವಿರುದ್ಧ ಸಚಿವ ಈಶ್ವರಪ್ಪ ಗುಡುಗು

ಗುರುವಾರ, 28 ಜನವರಿ 2021 (12:46 IST)
ಬೆಂಗಳೂರು : ಬೆಳಗಾವಿ ಜಿಲ್ಲೆ ನಮ್ಮದೆಂದ ಮಹಾರಾಷ್ಟ್ರ ಸಿಎಂ ವಿರುದ್ಧ ಸಚಿವ ಈಶ್ವರಪ್ಪ ಗುಡುಗಿದ್ದಾರೆ.

ಮಹಾ ಸಿಎಂ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಗಡಿ ವಿಚಾರ ಪ್ರಸ್ತಾಪಿಸಿ ಪ್ರಚಾರ ಪಡೆಯುತ್ತಿದ್ದಾರೆ. ಕರ್ನಾಟಕ ಭೂಮಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಅಂತಿದ್ದಾರೆ. ಮಹಾರಾಷ್ಟ್ರ ಭೂಮಿ ನಮಗೆ ಸೇರಬೇಕು ಅಂತ ಹೇಳಬೇಕಾ? ಮಹಾ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಉದ್ಧಟತನದ್ದು, ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ