ಎಸ್‌ಸಿ, ಎಸ್‌ಟಿ ಟೆಂಡರ್ ಸುಗ್ರೀವಾಜ್ಞೆ: ರಾಜ್ಯಪಾಲರನ್ನು ಭೇಟಿ ಮಾಡಿದ ಸಚಿವ ಜಯಚಂದ್ರ

ಮಂಗಳವಾರ, 31 ಮೇ 2016 (18:19 IST)
ರಾಜ್ಯ ಸರಕಾರದ ಎಸ್‌ಸಿ, ಎಸ್‌ಟಿ ಟೆಂಡರ್ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ ಮತ್ತು ಕಾನೂನು ಮತ್ತು ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ ಇಂದು ರಾಜಭವನಕ್ಕೆ ಭೇಟಿ ನೀಡಿದ್ದರು.
 
ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿಮಾಡಿದ ಸಚಿವರು, ರಾಜ್ಯ ಸರಕಾರದ ಎಸ್‌ಸಿ, ಎಸ್‌ಟಿ ಟೆಂಡರ್ ಸುಗ್ರೀವಾಜ್ಞೆ ಕುರಿತು ರಾಜ್ಯಪಾಲರಿಗೆ ವಿವರಣೆ ನೀಡಿದರು.
 
ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುಕೂಲಕ್ಕಾಗಿ ರಾಜ್ಯ ಸರಕಾರ ಈ ಯೋಜನೆಯನ್ನು ಘೋಷಣೆ ಮಾಡಿತ್ತು. ರಾಜ್ಯಪಾಲರು ಸರಕಾರದ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ರಾಜ್ಯಭವನಕ್ಕೆ ಬಂದು ಸ್ಪಷ್ಟನೆ ನೀಡಿದ್ದೇವೆ. ರಾಜ್ಯಪಾಲರು ಈ ಸುಗ್ರೀವಾಜ್ಞೆ ಕುರಿತು ಸಾಕಷ್ಟು ಚರ್ಚೆಯಾಗಬೇಕು ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ