ಸೇನೆ ವಿರುದ್ಧ ಘೋಷಣೆ: ಅನಗತ್ಯ ರಾಜಕೀಯ ಎಂದ ಕಾಗೋಡು

ಶುಕ್ರವಾರ, 26 ಆಗಸ್ಟ್ 2016 (10:35 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಆರೋಪಿಸಿದ್ದಾರೆ.
 
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವ ಪ್ರಕರಣದಲ್ಲಿ ಪ್ರತಿಪಕ್ಷ ನಾಯಕರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ತನಿಖೆಯ ನಂತರ ಸತ್ಯಾಸತ್ಯತೆ ಹೊರಬರಲಿದೆ. ಆದರೆ, ಪ್ರತಿಪಕ್ಷ ನಾಯಕರು ರಾಜ್ಯ ಸರಕಾರದ ವಿರುದ್ಧ ಅನಗತ್ಯ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
 
ವಸಂತನಗರದ ವಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ, ಕಾಶ್ಮೀರಿಗಳ ಸಮಸ್ಯೆ ಕುರಿತು ಚರ್ಚ ನಡೆಸಲು ಕಾರ್ಯಾಗಾರ ಆಯೋಜಿಸಿತ್ತು. ಈ ವೇಳೆ ಕೆಲವರು ಭಾರತೀಯ ಸೇನೆಯಿಂದ ಕಾಶ್ಮೀರಿಗಳಿಗೆ ಮುಕ್ತಿ ನೀಡಿ ಎಂದು ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ