ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕಾಗೋಡು ತಿಮ್ಮಪ್ಪ

ಗುರುವಾರ, 25 ಆಗಸ್ಟ್ 2016 (17:15 IST)
ಕಂದಾಯ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುವಂತೆ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
 
ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರು ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
 
ಕಂದಾಯ ಇಲಾಖೆಯ ಆಡಳಿತ ಯಂತ್ರ ಕುಸಿದಿದೆ. ಕೂಡಲೇ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಆಡಳಿತ ಯಂತ್ರವನ್ನು ಸರಿ ದಾರಿಗೆ ತರುವುದೇ ನನ್ನ ಗುರಿ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ