ಕಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಉಮೇಶ್ ಜಾಧವ್ ಪುತ್ರ ಅವಿನಾಶ್ ಗೆ ನೀಡಿದ ಹಿನ್ನೆಲೆಯಲ್ಲಿ ಭಾರೀ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಜಿ ನೀಡಿದ್ದ ಡಿಎನ್ಎ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ ಕೈ ನಾಯಕರು.
ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದು, ಡಿಎನ್ಎ ನೋಡಿ ನಾವು ಟಿಕೆಟ್ ಕೊಡಲ್ಲ ಎಂದಿದ್ದ ಸಂತೋಷ್ ಜಿಗೆ, ಹಾಗಿದ್ದರೆ ಉಮೇಶ್ ಜಾಧವ್ ಪುತ್ರನಿಗೆ ಯಾವ ಹಿನ್ನೆಲೆಯಲ್ಲಿ ಟಿಕೆಟ್ ನೀಡಿದ್ದೀರಿ ಎಂಬ ಪ್ರಶ್ನೆ ಮಾಡಿದ್ದಾರೆ.
ಕಲಬುರ್ಗಿ ಜಿಲ್ಲೆಯ ಬಿಜೆಪಿ ನಾಯಕರ ಕುಟುಂಬ ರಾಜಕಾರಣದ ಪಟ್ಟಿ ನೀಡಿದ ಪ್ರಿಯಾಂಕ್ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಪುತ್ರ ವ್ಯಾಮೋಹದ ಬಗ್ಗೆ ಲೋಕಸಭಾ ಚುನಾವಣೆಯಲ್ಲಿ ಅಬ್ಬರಿಸಿದ್ದರು ಬಿಜೆಪಿ ನಾಯಕರು.
ಖರ್ಗೆ ಪುತ್ರ ವ್ಯಾಮೋಹದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದಾಗಿ ಹೇಳಿದ್ದರು ಉಮೇಶ್ ಜಾಧವ್. ಇದೀಗ ತಮ್ಮ ಪುತ್ರನಿಗೆ ಟಿಕೆಟ್ ದೊರಕಿಸಿಕೊಟ್ಟಿರುವ ಉಮೇಶ್ ಜಾಧವ್ ಕ್ರಮಕ್ಕೆ ಟೀಕೆ ಮಾಡಿದ್ದಾರೆ.
ಡಿಎನ್ಎ ನೋಡಿ ಟಿಕೆಟ್ ಕೊಡಲ್ಲ ಎಂದಿರುವ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ ಸಚಿವ ಪ್ರಿಯಾಂಕ್ ಖರ್ಗೆ.