ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

Krishnaveni K

ಮಂಗಳವಾರ, 14 ಜನವರಿ 2025 (09:46 IST)
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಸಹೋದರ ಚನ್ನರಾಜು ಜೊತೆ ಪ್ರಯಾಣ ಮಾಡುತ್ತಿದ್ದರು. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತವಾಗಿದೆ.

ಎದುರಿಗೆ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಕಾರು ಮರಕ್ಕೆ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಎದುರಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆದರೆ ಅದೃಷ್ಟವಶಾತ್ ಸಚಿವೆಗೆ ಪ್ರಾಣಾಪಾಯವಾಗಿಲ್ಲ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೃಹಸಚಿವ ಜಿ ಪರಮೇಶ್ವರ್ ಸೇರಿದಂತೆ ಆಪ್ತರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಇತರರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ