ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗಂಭೀರ ಪೆಟ್ಟು: ಮಾಹಿತಿ ನೀಡಿದ ವೈದ್ಯರು

Krishnaveni K

ಮಂಗಳವಾರ, 14 ಜನವರಿ 2025 (11:20 IST)
ಬೆಳಗಾವಿ: ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗಂಭೀರ ಗಾಯಗಳಾಗಿವೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ.

ಇಂದು ತಮ್ಮ ಸಹೋದರ ಚನ್ನರಾಜು ಜೊತೆ ಬೆಳಗಾವಿಯ ಕಿತ್ತೂರು ತಾಲುಕಿನಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದಾಗ ನಾಯಿ ಅಡ್ಡ ಬಂತು ಎಂದು ತಪ್ಪಿಸಲು ಹೋಗಿ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದ ಕಾರು ಮರಕ್ಕೆ ಢಿಕ್ಕಿ ಹೊಡೆದಿತ್ತು.

ಪರಿಣಾಮ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಕಾರಿನಲ್ಲಿದ್ದ ಇತರರಿಗೆ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸಚಿವೆಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಸಚಿವರಿಗೆ ಬೆನ್ನಿನ ಎಲ್1 ಮತ್ತು ಎಲ್ 4 ಮೂಳೆ ಮುರಿದಿದೆ. ಕುತ್ತಿಗೆಗೆ ಪೆಟ್ಟು ಬಿದ್ದಿದೆ ಮತ್ತು ಮೆದುಳು ಬಾವು ಬಂದಿದೆ’ ಎಂದು ವಿವರಿಸಿದ್ದಾರೆ. ಸದ್ಯಕ್ಕೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶೀಘ್ರದಲ್ಲೇ ಅವರು ಚೇತರಿಸಿಕೊಳ್ಳಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ